ADVERTISEMENT

ಸರೋಜಿನಿ ಮಹಿಷಿ ವರದಿ ಜಾರಿಗೆ ಅಗತ್ಯ ಕ್ರಮ: ಡಿಸಿಎಂ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:30 IST
Last Updated 16 ಡಿಸೆಂಬರ್ 2019, 20:30 IST
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೋಮವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭಾಗವಹಿಸಿದರು  –ಪ್ರ-ಜಾವಾಣಿ ಚಿತ್ರ
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೋಮವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭಾಗವಹಿಸಿದರು  –ಪ್ರ-ಜಾವಾಣಿ ಚಿತ್ರ   

ಬೆಂಗಳೂರು:ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಪರಿಣಾಮಕಾರಿ ಪರಿಹಾರ ಒದಗಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟ ನಗರದ ಮೌರ್ಯವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಸಚಿವರು ಈ ಭರವಸೆ ನೀಡಿದರು.

‘ಮಹಿಷಿ ಆಯೋಗದ ವರದಿಯಂತೆ ‘ಸಿ’ ಮತ್ತು ‘ಡಿ’ ದರ್ಜೆಯಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗ ಮೀಸಲು ಕಡ್ಡಾಯ. ಆದರೆ ‘ಎ’ ಮತ್ತು ‘ಬಿ’ ದರ್ಜೆಯಲ್ಲಿ ಇದನ್ನು ಕಡ್ಡಾಯ ಮಾಡುವುದು ಸವಾಲಿನ ವಿಷಯ. ಆದರೆ, ನಾಡಿನ ಜನರಿಗೆ ಉದ್ಯೋಗ ದೊರೆತು, ಬದುಕು ಕಟ್ಟಿಕೊಳ್ಳಲೇಬೇಕು. ಪ್ರತಿ ಕುಟುಂಬಕ್ಕೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿಯಾಗಿದ್ದು ಇದಕ್ಕೆ ನಾವು ಬದ್ಧ’ ಎಂದರು.

ADVERTISEMENT

ಪರಿಹಾರ ಕ್ರಮ: ‘ಉದ್ಯೋಗಾಕಾಂಕ್ಷಿಗಳ ಕೌಶಲ ಹೆಚ್ಚಿಸಲು ಎಲ್ಲ ಏಜೆನ್ಸಿಗಳನ್ನು ಒಂದೇ ವೇದಿಕೆಗೆ ತಂದು ಏಕ ಗವಾಕ್ಷಿ ಯೋಜನೆಯಡಿ ಉದ್ಯೋಗ ಕೌಶಲ ಕಲಿಸಲು ಸರ್ಕಾರ ಕಾರ್ಯಪ್ರವೃತ್ತವಾ
ಗಿದೆ. ಈ ಮೂಲಕ ಉದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ದಾರಿಯಲ್ಲಿ ಶಿಕ್ಷಣ ಸಂಸ್ಥೆಗಳು ಸಹ ವಿದ್ಯಾರ್ಥಿಗಳಿಗೆ ಅವರ ಮುಂದಿನ ಉದ್ಯೋಗಕ್ಕೆ ಪೂರಕವಾದ ಕೌಶಲ ಕಲಿಸಲು ಅಗತ್ಯ ಕ್ರಮ ಕೈಗೊಳ್ಳಲಿವೆ’ ಎಂದರು.

‘ಎಲ್ಲಿಂದಲೋ ಬಂದವರು ಇಲ್ಲಿ ಕೆಲಸ ಗಿಟ್ಟಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಇಲ್ಲಿಯವರು ಇಲ್ಲಿನ ಕಂಪನಿ
ಗಳ ಜತೆ ಸಂಪರ್ಕ ಬೆಳೆಸಿಕೊಳ್ಳಲು ಪೂರಕ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಪರ್ಕದ ಕೊರತೆಯ ಸಣ್ಣ ಸಮಸ್ಯೆಯೇ ದೊಡ್ಡ ಸಮಸ್ಯೆ ಆಗಿ ಕಾಡುತ್ತಿತ್ತು. ಈಗ ಅದಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ಓದುವ ಸಂದರ್ಭದಲ್ಲೇ ಉದ್ಯೋಗಾವಕಾಶದ ಮಾಹಿತಿ ಮತ್ತು ಅಗತ್ಯ ತರಬೇತಿ ಮತ್ತು ವೃತ್ತಿ ಪರ ಅವಕಾಶ ಸೃಷ್ಟಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.