ADVERTISEMENT

ರೌಡಿ ವಿಲ್ಸನ್‌ ಗಾರ್ಡನ್‌ ನಾಗನ ಅಭಿಮಾನಿಗಳೆಂದು ಭಯ ಹುಟ್ಟಿಸುವ ವಿಡಿಯೊ: FIR

ವಿಲ್ಸನ್‌ ಗಾರ್ಡನ್‌ ನಾಗನ ಅಭಿಮಾನಿಗಳ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 14:56 IST
Last Updated 7 ಆಗಸ್ಟ್ 2025, 14:56 IST
<div class="paragraphs"><p>ಫೇಸ್‌ಬುಕ್, ಇನ್‌ಸ್ಟಾಗ್ರಾಮ್</p></div>

ಫೇಸ್‌ಬುಕ್, ಇನ್‌ಸ್ಟಾಗ್ರಾಮ್

   

ರಾಯಿಟರ್ಸ್ ಚಿತ್ರ

ಬೆಂಗಳೂರು: ರೌಡಿ ವಿಲ್ಸನ್‌ ಗಾರ್ಡನ್‌ ನಾಗನ ಅಭಿಮಾನಿಗಳೆಂದು ಇನ್‌ಸ್ಟಾಗ್ರಾಂ ಖಾತೆ ತೆರೆದು, ಭಯದ ವಾತಾವರಣ ಸೃಷ್ಟಿಸುತ್ತಿದ್ದ ಆರೋಪಿಗಳ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆದು ಬಿಲ್ಡಪ್ ಫೋಟೊ, ವಿಡಿಯೊ ಹಾಕಿದ್ದರು. ಪೊಲೀಸ್ ಕಾನ್‌ಸ್ಟೆಬಲ್‌ ಡಿ.ಎಸ್‌.ಆನಂದ್‌ ಅವರು ಸಾಮಾಜಿಕ ಜಾಲತಾಣಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಈ ರೀತಿಯ ವಿಡಿಯೊಗಳು ಹಾಗೂ ಫೋಟೊಗಳು ಪತ್ತೆ ಆಗಿದ್ದವು. ಆರಂಭದಲ್ಲಿ ಎನ್‌ಸಿಆರ್ ದಾಖಲು ಮಾಡಿಕೊಳ್ಳಲಾಗಿತ್ತು. ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಎರಡನೇ ಎಸಿಎಂಎಂ ನ್ಯಾಯಾಲಯ ಸೂಚಿಸಿದ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದರು.

‘ವಿಲ್ಸನ್‌ ಗಾರ್ಡನ್‌ ನಾಗನ ಅಭಿಮಾನಿಗಳೆಂದು ಹೇಳಿಕೊಂಡು ಇನ್‌ಸ್ಟಾಗ್ರಾಂನಲ್ಲಿ ಖಾತೆ ತೆರೆದಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ಮಾರಕಾಸ್ತ್ರಗಳನ್ನು ಪ್ರದರ್ಶಿಸುತ್ತಿರುವ ವಿಡಿಯೊ ಹಾಕಿದ್ದರು. ಆ ವಿಡಿಯೊಗಳಿಗೆ ಚಲನಚಿತ್ರಗಳ ಡೈಲಾಗ್‌ ಹಾಗೂ ಹಾಡುಗಳನ್ನು ಬಳಸಿಕೊಂಡು ಯುವ ಜನರನ್ನು ರೌಡಿ ಚಟುವಟಿಕೆಗಳಿಗೆ ಪ್ರೇರೇಪಿಸುವಂತೆ ಮಾಡಿದ್ದು ಕಂಡುಬಂದಿತ್ತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.