ADVERTISEMENT

ವಿಂಡೋ-ಟ್ರೈಲಿಂಗ್: ರೈಲು ಕಾರ್ಯಾಚರಣೆ ಮತ್ತು ಸುರಕ್ಷತಾ ಮಾನದಂಡ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 16:16 IST
Last Updated 20 ಆಗಸ್ಟ್ 2025, 16:16 IST
ಅಮೃತ ಭಾರತ ನಿಲ್ದಾಣ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಕೆಂಗೇರಿ ರೈಲು ನಿಲ್ದಾಣದ ಕಾಮಗಾರಿಯನ್ನು ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ಪರಿಶೀಲಿಸಿದರು
ಅಮೃತ ಭಾರತ ನಿಲ್ದಾಣ ಯೋಜನೆಯಡಿ ನವೀಕರಣಗೊಳ್ಳುತ್ತಿರುವ ಕೆಂಗೇರಿ ರೈಲು ನಿಲ್ದಾಣದ ಕಾಮಗಾರಿಯನ್ನು ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ಪರಿಶೀಲಿಸಿದರು   

ಬೆಂಗಳೂರು: ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ವಿಂಡೋ-ಟ್ರೈಲಿಂಗ್ ತಪಾಸಣೆ ನಡೆಸುವ ಮೂಲಕ ಕೆಎಸ್‌ಆರ್‌ ಬೆಂಗಳೂರು–ಮಂಡ್ಯ ನಡುವಿನ ಕಾರ್ಯಾಚರಣೆ ಮತ್ತು ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದರು.

ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಕೆಂಗೇರಿ, ರಾಮನಗರ, ಚನ್ನಪಟ್ಟಣ ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯ ಪ್ರಗತಿಯನ್ನು ಕೂಡ ಪರಿಶೀಲಿಸಿದರು. ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ನಿಲ್ದಾಣಗಳಲ್ಲಿ ಸ್ವಚ್ಛತೆ, ಮೂಲಸೌಕರ್ಯ ಮೇಲ್ದರ್ಜೆಗೇರಿಸುವ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಕ್ರಮಗಳನ್ನು ಅವರು ಪರಿಶೀಲಿಸಿದರು.

ADVERTISEMENT

ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ, ಮುಖ್ಯ ಯೋಜನಾ ವ್ಯವಸ್ಥಾಪಕ (ಗತಿ ಶಕ್ತಿ) ಗುಲ್ ಅಶ್ಫಾಕ್ ಮಹಮ್ಮದ್, ಹಿರಿಯ ವಿಭಾಗೀಯ ಎಂಜಿನಿಯರ್ ಸಂಚಿತ್ ಶ್ರೀವಾಸ್ತವ, ಹಿರಿಯ ವಿಭಾಗೀಯ ಎಂಜಿನಿಯರ್ (ವಿದ್ಯುತ್) ಬಿ.ಎಸ್. ಶಿವಪ್ರಸಾದ್, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ನಿವೇದಿತಾ ಎಸ್. ಬಾಲರಡ್ಡಿಯವರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.