ADVERTISEMENT

ಟೆಕಿ ಮೇಲೆ ಹಲ್ಲೆ ಮಾಡಿ ನಾಟಕ ಮಾಡಿದ್ದ ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2025, 3:06 IST
Last Updated 22 ಏಪ್ರಿಲ್ 2025, 3:06 IST
<div class="paragraphs"><p>ಶಿಲಾದಿತ್ಯ ಬೋಸ್</p></div>

ಶಿಲಾದಿತ್ಯ ಬೋಸ್

   

ಬೆಂಗಳೂರು: ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ‌.

ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 109, 115(2), 304, 324 ಹಾಗೂ 352 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ADVERTISEMENT

ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು‌ ನೀಡಿದ್ದರು. ದೂರು ಆಧರಿಸಿ ಸಾಫ್ಟವೇರ್ ಎಂಜಿನಿಯರ್ ವಿಕಾಸ್ ಕುಮಾರ್ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದರು.

ಆದರೆ, ಶಿಲಾದಿತ್ಯ ಬೋಸ್ ಅವರೇ ಟೆಕಿ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.