
ಬೆಂಗಳೂರು: ವಿಪ್ರೊ ಕಂಪನಿ 15ನೇ ಆವೃತ್ತಿಯ ‘ವಿಪ್ರೊ ಅರ್ಥಿಯನ್’ ಪ್ರಶಸ್ತಿ ಪ್ರದಾನ ಸಮಾರಂಭ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ನೆರವೇರಿತು.
ಈ ಪ್ರಶಸ್ತಿಗೆ ದೇಶದ ಬೇರೆ ಬೇರೆ ಭಾಗದ ಶಾಲೆ ಹಾಗೂ ಕಾಲೇಜುಗಳಿಂದ ಬಂದಿದ್ದ 2,000ಕ್ಕೂ ಹೆಚ್ಚು ಪ್ರವೇಶಗಳ ಪೈಕಿ 25 ತಂಡಗಳನ್ನು ತೀರ್ಪುಗಾರರು ಆಯ್ಕೆ ಮಾಡಿದರು.
ಜೀವವೈವಿಧ್ಯತೆ, ತ್ಯಾಜ್ಯ ನಿರ್ವಹಣೆ ಹಾಗೂ ಜಲ ಸಂರಕ್ಷಣೆ ಸೇರಿ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲು ಉತ್ತೇಜಿಸಲಾಗುತ್ತದೆ. ಈ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತದೆ.
ಈ ಬಾರಿಯ ಪ್ರಶಸ್ತಿಗೆ, ಬೆಂಗಳೂರಿನ ಮಾರಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳು ತಮ್ಮ ಶಾಲೆ, ಮನೆಗಳು ಮತ್ತು ಗ್ರಾಮದಲ್ಲಿ ನೀರಿನ ಮೂಲಗಳು, ಬಳಕೆ ಹಾಗೂ ಸಂರಕ್ಷಣೆಯ ಬಗ್ಗೆ ಅಧ್ಯಯನ ನಡೆಸಿದರು.
ವಿಪ್ರೊ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್, ವಿಪ್ರೊ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಪಿ.ಎಸ್.ನಾರಾಯಣ ಅವರು ಬೆಂಗಳೂರಿನ ಮಾರಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.