ADVERTISEMENT

ಬೆಂಗಳೂರು: ಅಪಾರ್ಟ್‌ಮೆಂಟ್‌ನ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯ ಮೃತದೇಹ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 11:50 IST
Last Updated 27 ಜುಲೈ 2020, 11:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಯಲಹಂಕ ಉಪನಗರದ 4ನೇ ಹಂತದಲ್ಲಿರುವ ಅಪಾರ್ಟ್‌ಮೆಂಟ್ ‌ಸಮುಚ್ಚಯದ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ಆಗಿರುವ ಮಹಿಳೆ, ಶುಕ್ರವಾರ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

ಮಹಿಳೆಗಾಗಿ ಹುಡುಕಾಟವೂ ನಡೆಯುತ್ತಿತ್ತು. ಭಾನುವಾರ ಸಂಜೆ ನೀರಿನ ಟ್ಯಾಂಕ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಇದೊಂದು ಆತ್ಮಹತ್ಯೆಯಂತೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಎಲ್ಲ ಆಯಾಮದಲ್ಲೂ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದರು.

ADVERTISEMENT

ಕೊರೊನಾ ಹರಡುವಿಕೆ ಹೆಚ್ಚಿರುವ ಸಂದರ್ಭದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮೃತದೇಹದ ಗಂಟಲಿನ ಮಾದರಿ ಸಂಗ್ರಹಿಸಿರುವ ವೈದ್ಯರು, ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದರು.

ಮೃತದೇಹ ಬಿದ್ದಿದ್ದ ನೀರು ಬಳಕೆ: ಅಪಾರ್ಟ್‌ಮೆಂಟ್ ಸಮುಚ್ಚಯದ ನಿವಾಸಿಗಳು, ಟ್ಯಾಂಕ್‌ನಲ್ಲಿರುವ ನೀರನ್ನೇ ಸ್ನಾನಕ್ಕೆ, ಕುಡಿಯುವುದಕ್ಕೆ ಹಾಗೂ ಮನೆಗೆ ಬಳಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.