ADVERTISEMENT

ಬೆಂಗಳೂರು: ವಾಯುವಿಹಾರಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ ಡಿಕ್ಕಿ, ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 14:30 IST
Last Updated 9 ಜೂನ್ 2024, 14:30 IST
<div class="paragraphs"><p>ಅಪಘಾತ</p></div>

ಅಪಘಾತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳುತ್ತಿದ್ದ ವೃದ್ಧೆಯೊಬ್ಬರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಹೇರೋಹಳ್ಳಿ ನಿವಾಸಿ ಶಿವಮ್ಮ (66) ಮೃತಪಟ್ಟವರು.

‘ಶನಿವಾರ ಬೆಳಿಗ್ಗೆ 8.45ಕ್ಕೆ ವಾಯುವಿಹಾರ ಮುಗಿಸಿ ಹೇರೋಹಳ್ಳಿ ಕೆರೆ ಬಳಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಅದೇ ವೇಳೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಸವಾರ, ನಿಯಂತ್ರಣ ತಪ್ಪಿ ಶಿವಮ್ಮ ಅವರಿಗೆ ಡಿಕ್ಕಿ ಹೊಡೆದ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಈ ಬಗ್ಗೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್‌ ಸವಾರ ಸುನಿಲ್‌ ಎಂಬಾತನನ್ನು ಬಂಧಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.