ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಸೆಲ್ವಿ (24) ಎಂದು ಗುರುತಿಸಲಾಗಿದೆ.
ಮೋಟಾರ್‌ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಜಮೀರ್ ಅಹಮದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳೀಯರ ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.