ADVERTISEMENT

ಬೆಂಗಳೂರು | ಬೈಕ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 15:56 IST
Last Updated 11 ಜೂನ್ 2025, 15:56 IST
ರತ್ನಾ 
ರತ್ನಾ    

ಬೆಂಗಳೂರು: ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಂಕ್ರೀಟ್‌ ಮಿಶ್ರಣ ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಗರಬಾವಿ ನಿವಾಸಿ ರತ್ನಾ (53) ಮೃತಪಟ್ಟವರು. ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಯಲಹಂಕದ ಬಿ.ಬಿ. ಮುಖ್ಯರಸ್ತೆ ವೆಂಕಟಾಲಾ ಮೇಲ್ಸೇತುವೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ರತ್ನಾ ಅವರು ಪತಿ ಪ್ರಕಾಶ್ ಹಾಗೂ ಮೂವರು ಮಕ್ಕಳ ಜತೆ ನಾಗರಬಾವಿಯಲ್ಲಿ ನೆಲಸಿದ್ದರು. ಮೂವರು ಹೆಣ್ಣು ಮಕ್ಕಳಿಗೆ ಮದುವೆಯಾಗಿದೆ. ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಿಕ್ಕಜಾಲ ಬಳಿಯಿರುವ ಮಗಳ ಮನೆಗೆ ಪತಿ ಪ್ರಕಾಶ್ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು.

ADVERTISEMENT

ವೆಂಕಟಾಲಾ ಮೇಲ್ಸೇತುವೆಯಲ್ಲಿ ಹೋಗುವಾಗ ಹಿಂದಿನಿಂದ ಅತೀವೇಗವಾಗಿ ಬಂದ ಕಾಂಕ್ರೀಟ್ ಮಿಶ್ರಣದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ರತ್ನಾ ಅವರ ಮೇಲೆಯೇ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟವರು. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.