ADVERTISEMENT

ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 15:41 IST
Last Updated 4 ನವೆಂಬರ್ 2025, 15:41 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೇಳೆ ಮಹಿಳೆಯನ್ನು ಅಡ್ಡಗಟ್ಟಿದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇಂದಿರಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಇಂದಿರಾನಗರ ನಿವಾಸಿ 31 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ವ್ಯಕ್ತಿಯ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ADVERTISEMENT

ನ.1ರಂದು ಬೆಳಿಗ್ಗೆ ಮಹಿಳೆಯೊಬ್ಬರು ಸಾಕು ನಾಯಿಯನ್ನು ಕರೆದುಕೊಂಡು ದೊಮ್ಮಲೂರು ಎರಡನೇ ಹಂತದ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದಿದ್ದ ಆರೋಪಿ ಮೇಡಂ ಎಂದು ಕರೆದು ಸಂತ್ರಸ್ತೆಯನ್ನು ಮಾತನಾಡಿಸಿದ್ದ. ಬಳಿಕ ಅಶ್ಲೀಲವಾಗಿ ವರ್ತಿಸಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದು, ಆರೋಪಿಯ ಮುಖ ಚಹರೆ ಪತ್ತೆಯಾಗಿದೆ. ಸದ್ಯದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.