ADVERTISEMENT

ಬೆಂಗಳೂರು | ಪತಿ ಕೊಲೆ: ಪತ್ನಿ, ಪ್ರಿಯಕರನ ಬಂಧನ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2024, 18:57 IST
Last Updated 10 ಆಗಸ್ಟ್ 2024, 18:57 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಪತಿಯನ್ನು ಪತ್ನಿಯೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದು ಈ ಸಂಬಂಧ ವೈಟ್‌ಫೀಲ್ಡ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ವೈಟ್‌ಫೀಲ್ಡ್‌ನ‌ ಹಗದೂರು ನಿವಾಸಿ ಮಹೇಶ್ (36) ಕೊಲೆಯಾದ ವ್ಯಕ್ತಿ.  

ADVERTISEMENT

ಕೃತ್ಯ ಎಸಗಿದ ಆರೋಪದ ಅಡಿ ಕೊಲೆಯಾದ ಮಹೇಶ್ ಅವರ ಪತ್ನಿ ತೇಜಸ್ವಿ ಹಾಗೂ ಆಕೆಯ ಪ್ರಿಯಕರ ಗಜೇಂದ್ರ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹಾಸನದ ಅರಕಲಗೂಡಿನ ದೊಂಬರಪಾಳ್ಯ ನಿವಾಸಿ ಮಹೇಶ್ ಮತ್ತು ತೇಜಸ್ವಿನಿ ಕೆಲವು ವರ್ಷಗಳ ಹಿಂದೆ ಮದುವೆ ಆಗಿದ್ದರು. ಹಗದೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಹೇಶ್, ಆಟೋ ಚಾಲನೆ ಜತೆಗೆ ರಂಗೋಲಿ ಮಾರಾಟ ಮಾಡುತ್ತಿದ್ದರು. ತೇಜಸ್ವಿನಿ ಅವರು ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.‌ ಈ ನಡುವೆ ತೇಜಸ್ವಿನಿ ಹಾಗೂ ಗಜೇಂದ್ರ ಅವರ ಮಧ್ಯೆ ಸಲುಗೆ ಏರ್ಪಟ್ಟಿತ್ತು. ಇಬ್ಬರೂ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.