ADVERTISEMENT

ಪೀಣ್ಯ ದಾಸರಹಳ್ಳಿ | ಹಣಕಾಸಿನ ವಿಚಾರ: ಕೊಡಲಿಯಿಂದ ಕೊಚ್ಚಿ ಮಹಿಳೆಯ ಕೊಲೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 19:00 IST
Last Updated 12 ಜನವರಿ 2026, 19:00 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಪೀಣ್ಯ ದಾಸರಹಳ್ಳಿ: ಉತ್ತರ ತಾಲ್ಲೂಕಿನ ಕುದುರೆಗೆರೆ ಕಾಲೊನಿಯಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 

ದಾಕ್ಷಾಯಿಣಿ (55) ಕೊಲೆಯಾದ ಮಹಿಳೆ.

ADVERTISEMENT

ಶಾಲೆಯಿಂದ ಮೊಮ್ಮಗನನ್ನು ಮನೆಗೆ ಕರೆದುಕೊಂಡು ಬರುವಾಗ ಹೊಂಚು ಹಾಕಿದ್ದ ಆರೋಪಿ, ಕೊಡಲಿಯಿಂದ ಮೂರು ಬಾರಿ ತಲೆಗೆ ಹೊಡೆದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ, ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡುವ ಮುನ್ನ ಆರೋಪಿ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮುರಳೀಧರ್ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.

ಸಂಬಂಧಿಯೇ ದಾಕ್ಷಾಯಿಣಿ ಅವರನ್ನು ಕೊಲೆ ಮಾಡಿ ಪರಾರಿ ಆಗಿರುವ ಶಂಕೆಯಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.