ADVERTISEMENT

ಮಹಿಳೆಯ ಫೋಟೊ ತೆಗೆದ ಪ್ರಕರಣ: ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2023, 7:34 IST
Last Updated 4 ಏಪ್ರಿಲ್ 2023, 7:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೊಗಳನ್ನು ಕ್ಲಿಕ್ಕಿಸಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ಆಂಧ್ರಪ್ರದೇಶದ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬೆಂಗಳೂರಿನಿಂದ ಡೆಹ್ರಾಡೂನ್‌ಗೆ ಹೋಗಲೆಂದು ಏಪ್ರಿಲ್ 1ರಂದು ರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಟರ್ಮಿನಲ್ 1ರಲ್ಲಿರುವ ಮಳಿಗೆಯಲ್ಲಿ ಕಾಫಿ ಕುಡಿಯುತ್ತಿದ್ದರು. ಶಾರ್ಟ್‌ ಧರಿಸಿದ್ದ ಅವರ ಫೋಟೊವನ್ನು ಆರೋಪಿ ತನ್ನ ಮೊಬೈಲ್‌ನಲ್ಲಿ ಕ್ಲಿಕ್ಕಿಸಿದ್ದ. ಅದನ್ನು ನೋಡಿದ್ದ ಮಹಿಳೆ, ಆತನನ್ನು ಪ್ರಶ್ನಿಸಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು.’

ADVERTISEMENT

‘ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಸಹಾಯದಿಂದ ಮಹಿಳೆ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಖಾಸಗಿ ಅಂಗಗಳ ಫೋಟೊವನ್ನು ಆರೋಪಿ ಕ್ಲಿಕ್ಕಿಸಿದ್ದಾನೆಂದು ಆರೋಪಿಸಿದ್ದಾರೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.