ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಯಲ್ಲಿ ಸೋಮವಾರ ವೃದ್ದೆಯ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೃದ್ದೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆಯತಪ್ಪಿ ಮೋರಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.