ADVERTISEMENT

ಸಮಗ್ರ ತನಿಖೆ ನಡೆಸಿ: ರಾಜ್ಯ ಮಹಿಳಾ ಆಯೋಗ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 21:40 IST
Last Updated 20 ಜನವರಿ 2026, 21:40 IST
<div class="paragraphs"><p> ರಾಮಚಂದ್ರ ರಾವ್‌</p></div>

ರಾಮಚಂದ್ರ ರಾವ್‌

   

ಬೆಂಗಳೂರು: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ತಿಳಿಸಿದೆ. 

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ‘ರಾಮಚಂದ್ರ ರಾವ್‌ ಅವರು ಪೊಲೀಸ್‌ ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿರುವ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದೆ. ಆಯೋಗ ಈ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿದೆ. ಮಹಿಳೆಯರಿಗೆ ರಕ್ಷಣೆ ನೀಡುವ ಉನ್ನತ ಹುದ್ದೆಯಲ್ಲಿರುವ ಪೊಲೀಸ್‌ ಅಧಿಕಾರಿಯೇ ಅಸಭ್ಯ ವರ್ತನೆಯಲ್ಲಿ ತೊಡಗಿರುವುದು ಖಂಡನೀಯ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.  

ADVERTISEMENT

‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ–2013’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಾಮಚಂದ್ರ ರಾವ್‌ ಅವರ ವಿರುದ್ಧ ಪಾರದರ್ಶಕ ತನಿಖೆ ನಡೆಸಬೇಕು. ಮಹಿಳೆಯರ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತ ವರದಿಯನ್ನು ಏಳು ದಿನಗಳ ಒಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದೆ.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.