ADVERTISEMENT

ಮದ್ಯ ನಿಷೇಧಕ್ಕೆ ಆಗ್ರಹಿಸಿದ ಸತ್ಯಾಗ್ರಹಿಗಳಿಗೆ ನಗರ ಪ್ರವೇಶ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 6:30 IST
Last Updated 7 ನವೆಂಬರ್ 2019, 6:30 IST
ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರು ರೈಲು ನಿಲ್ದಾಣದಲ್ಲಿ ಗುರುವಾರ ಮಹಿಳೆಯರು ಪ್ರತಿಭಟಿಸಿದರು (ಪ್ರಜಾವಾಣಿ ಚಿತ್ರ: ಎಸ್.ಕೆ.ದಿನೇಶ್).
ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರು ರೈಲು ನಿಲ್ದಾಣದಲ್ಲಿ ಗುರುವಾರ ಮಹಿಳೆಯರು ಪ್ರತಿಭಟಿಸಿದರು (ಪ್ರಜಾವಾಣಿ ಚಿತ್ರ: ಎಸ್.ಕೆ.ದಿನೇಶ್).   

ಬೆಂಗಳೂರು:ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ನಗರದ ರೈಲು ನಿಲ್ದಾಣಕ್ಕೆ ಬಂದಿದ್ದಾರೆ.

ಅಲ್ಲಿಂದ ಅವರನ್ನು ಸ್ವಾತಂತ್ರ ಉದ್ಯಾನವನಕ್ಕೆ ಹೋಗಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಿಲ್ದಾಣದಲ್ಲಿ ಕುಳಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

‘ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ’ಎಂದು ಮುಖಂಡರು ಆರೋಪಿಸಿದ್ದಾರೆ.

‘ರಾಜ್ಯದಲ್ಲಿ ಮದ್ಯಮಾರಾಟ ನಿಷೇಧ ಮಾಡಬೇಕು. ಹಂತಹಂತವಾಗಿ ಮಾಡುವುದಾದರೆ ಮಾಹಿತಿ ನೀಡಬೇಕು. ಪ್ರತಿಗ್ರಾಮದಲ್ಲಿ ಸಮಿತಿ ರಚಿಸಬೇಕು ಅದರಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವ, ಅಕ್ರಮ ಮದ್ಯ ಮಾರಾಟ ತಡೆಯುವ ಅಧಿಕಾರ ಸಮಿತಿಗೆ ಕೊಡಬೇಕು’ಎಂದು ಪ್ರತಿಭಟನಾನಿರತರ ಮಹಿಳೆಯರು ಒತ್ತಾಯಿಸಿದರು.

ಪ್ರತಿಭಟನಾನಿರತ ಮಹಿಳೆಯರನ್ನು ಉದ್ದೇಶಿಸಿ ರಂಗಕರ್ಮಿ ಪ್ರಸನ್ನ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.