ADVERTISEMENT

ಮಹಿಳೆಯರ ಸೇವೆ ಅನನ್ಯ: ಅರುಣ್ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 20:52 IST
Last Updated 7 ಮಾರ್ಚ್ 2021, 20:52 IST
ರಾಜ್ಯ ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ, ಮಾಜಿ ಮಹಾಪೌರರಾದ ಶಾಂತಕುಮಾರಿ, ಗೋವಿಂದರಾಜನಗರ ಬಿಜೆಪಿ ಮಂಡಲದ ಅಧ್ಯಕ್ಷ ವಿಶ್ವನಾಥಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಮ್ಮ ಅವರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು
ರಾಜ್ಯ ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ, ಮಾಜಿ ಮಹಾಪೌರರಾದ ಶಾಂತಕುಮಾರಿ, ಗೋವಿಂದರಾಜನಗರ ಬಿಜೆಪಿ ಮಂಡಲದ ಅಧ್ಯಕ್ಷ ವಿಶ್ವನಾಥಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಮ್ಮ ಅವರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು   

ಬೆಂಗಳೂರು: ‘ಹೆಣ್ಣು ತ್ಯಾಗಮಯಿ. ತಾಯಿಯಾಗಿ, ಸಹೋದರಿಯಾಗಿ ಕುಟುಂಬದ ನೊಗ ಹೊರುತ್ತಾಳೆ. ಎಂತಹುದೇ ಕಷ್ಟ ಬಂದರೂ ಅದನ್ನು ಸಹಿಸಿಕೊಂಡು ಮನೆತನದ ಏಳ್ಗೆಗೆ ದುಡಿಯುತ್ತಾಳೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಆಕೆಯ ಕೊಡುಗೆ ಅನನ್ಯ’ ಎಂದು ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರುತಿ ಮಂದಿರ ವಾರ್ಡ್‌ನ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ
ಮಾತನಾಡಿದರು.

‘ಅಂತರರಾಷ್ಟ್ರೀಯ ದಿನ ಆಚರಿಸುವ ಮೂಲಕ ಮಹಿಳೆಯರ ಸೇವೆಯನ್ನು ಸ್ಮರಿಸಲಾಗುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.