ADVERTISEMENT

ಹೆಬ್ಬಾಳದಲ್ಲಿ ‘ಮಹಿಳಾ’ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 19:48 IST
Last Updated 2 ಏಪ್ರಿಲ್ 2019, 19:48 IST
ಫ್ಯಾಷನ್‌ ಷೋದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಫ್ಯಾಷನ್‌ ಷೋದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು   

ಯಲಹಂಕ: ಹೆಬ್ಬಾಳ–ಕೆಂಪಾಪುರದ ಒಕ್ಕಲಿಗರ ಹಿತರಕ್ಷಣಾ ವೇದಿಕೆಯ ಮಹಿಳಾ ಘಟಕ ಹಾಗೂ ಸ್ತ್ರೀಶಕ್ತಿ ಸಂಘಗಳ ಒಕ್ಕೂಟದಿಂದ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ದಿನಾಚರಣೆಯ ಅಂಗವಾಗಿ ಮ್ಯೂಸಿಕಲ್ ಚೇರ್, ಕೇಶವಿನ್ಯಾಸ ಹಾಗೂ ರಂಗೋಲಿ ಸ್ಪರ್ಧೆಗನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಹಿಳೆಯರು ಭರತನಾಟ್ಯ, ಸಾಮೂಹಿಕ ನೃತ್ಯ, ಹಾಡು ಮತ್ತು ಫ್ಯಾಷನ್‌ ಷೋಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ADVERTISEMENT

ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ,‘ತಾಯಂದಿರು ಗಂಡು-ಹೆಣ್ಣು ಮಕ್ಕಳ ವಿಚಾರದಲ್ಲಿ ತಾರತಮ್ಯ ಮಾಡದೆ ಇಬ್ಬರನ್ನೂ ಸಮಾನತೆಯಿಂದ ಬೆಳೆಸಬೇಕು. ಸಮಾಜದಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳು ಹೆಚ್ಚಾಗುತ್ತಿವೆ.ಇದಕ್ಕೆ ಹೆದರಬಾರದು, ಎದುರಿಸಬೇಕು. ಕೌಶಲಗಳನ್ನು ಕರಗತ ಮಾಡಿಕೊಂಡು ಉದ್ಯೋಗ ಗಳಿಸಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.