ADVERTISEMENT

ಬೆಂಗಳೂರು | ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 14:16 IST
Last Updated 30 ಏಪ್ರಿಲ್ 2025, 14:16 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ಚಿಕ್ಕಜಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಖಾಲಿ ಪ್ರದೇಶದಲ್ಲಿ ನೈಜೀರಿಯಾ ದೇಶದ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.

ಮಹಿಳೆಯ ಮೃತದೇಹದ ಮೇಲೆ ಹಲ್ಲೆಯಿಂದ ಆಗಿರುವ ಗಾಯದ ಗುರುತುಗಳಿವೆ. ಮೃತ ಮಹಿಳೆಗೆ ಅಂದಾಜು 30 ವರ್ಷ ಇರಬಹುದು. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

‘ಮಹಿಳೆ ಕೆಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದು ಕೆಲಸ ಮಾಡುತ್ತಿದ್ದರು. ಕೆಲಸದ ಸ್ಥಳದಲ್ಲಿ ನಡೆದ ಗಲಾಟೆಯಿಂದ ಕೊಲೆಯಾಗಿದೆಯೇ ಅಥವಾ ಬೇರೆ ಸ್ಥಳಗಳಲ್ಲಿ ಕೊಲೆ ಮಾಡಿ ಮೃತದೇಹವನ್ನು ತಂದು ಎಸೆಯಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.