ADVERTISEMENT

ಮಹಿಳಾ ದಿನ: ಬಿಎಂಟಿಸಿಯಲ್ಲಿ ನಾಳೆ ವನಿತೆಯರಿಗೆ ಪ್ರಯಾಣ ಉಚಿತ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 19:29 IST
Last Updated 7 ಮಾರ್ಚ್ 2023, 19:29 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬುಧವಾರ(ಮಾರ್ಚ್‌ 8) ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಜ್ರ, ವಾಯುವಜ್ರ ಸೇರಿ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು. ಮಹಿಳೆಯರು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ಉಪಯೋಗಿಸುವುದರಿಂದ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಿದಂತಾಗಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಬಿಎಂಟಿಸಿ 48 ಘಟಕಗಳು, 50 ಬಸ್‌ ನಿಲ್ದಾಣಗಳು, 6,600 ಬಸ್‌ಗಳನ್ನು ಹೊಂದಿದ್ದು, ಪ್ರತಿನಿತ್ಯ 54 ಸಾವಿರ ಸುತ್ತುವಳಿಗಳಲ್ಲಿ 10.84 ಲಕ್ಷ ಕಿಲೋ ಮೀಟರ್ ಕ್ರಮಿಸುತ್ತಿದೆ. ಸರಾಸರಿ 29 ಲಕ್ಷ ಪ್ರಯಾಣಿಕರು ನಿತ್ಯ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿವರಿಸಿದೆ.

ADVERTISEMENT

ಮಹಿಳಾ ಸಿಬ್ಬಂದಿಯಿಂದ ರೈಲು ಚಾಲನೆ
ಬೆಂಗಳೂರು:
ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬೆಂಗಳೂರು–ಮೈಸೂರು ನಡುವಿನ ರಾಜ್ಯರಾಣಿ ಎಕ್ಸ್‌ಪ್ರೆಸ್‌ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ಚಾಲನೆ ಮಾಡಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈಲು ಹೊರಡಲಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.