ಬೆಂಗಳೂರು: ಶಾಲೆಗಳಲ್ಲಿನ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಿರುವಂತೆಯೇ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೂ ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಪ್ರಾಂಶುಪಾಲರ ಸಂಘ ಮನವಿ ಮಾಡಿದೆ.
‘ಈಗ ಯಾವುದೇ ತರಗತಿಗಳು ನಡೆಯುತ್ತಿಲ್ಲ. ಕಾಲೇಜುಗಳು ಪ್ರಾರಂಭವಾಗಲು ಒಂದು ವಾರ ಇರುವಂತೆ ಕಚೇರಿಗೆ ಹೋದರೂ ದಾಖಲಾತಿ ಮತ್ತಿತರ ಕೆಲಸಗಳನ್ನು ಪೂರ್ಣಗೊಳಿಸಬಹುದು. ಈಗ ಕಾಲೇಜುಗಳಿಗೆ ತೆರಳಿದರೆ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಸಂಘದ ಉಪಾಧ್ಯಕ್ಷ ಎಂ.ಪಿ. ಕರಬಸಪ್ಪ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.