
ಬೆಂಗಳೂರು: ಮಹದೇವಪುರ ಮುಖ್ಯರಸ್ತೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ದುರಸ್ತಿ ವೇಳೆ ಸಾರ್ವೆ ಕುಸಿದು ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಹಾವೇರಿಯ ಯಸೂಫ್ ಷರೀಫ್ (35) ಮೃತ ಕಾರ್ಮಿಕ. ತನುಜಾ, ಆಕಾಶ್ ಸೇರಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಅಬ್ದುಲ್ ವಾಜೀದ್ ಅವರಿಗೆ ಸೇರಿದ ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಗುರುವಾರ ಸಂಜೆ ಏಕಾಏಕಿ ಸಾರ್ವೆ ಕುಸಿದ್ದಿದ್ದರಿಂದ ಕೆಳಕ್ಕೆ ಬಿದ್ದ ಷರೀಫ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಕಟ್ಟಡದ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಪೊಲೀಸರು ಹೇಳಿದರು.
ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಡಿಸಿಪಿ ಕೆ.ಪರಶುರಾಮ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.