ADVERTISEMENT

ಕಿದ್ವಾಯಿ ಆಸ್ಪತ್ರೆ: 10 ಸಾವಿರ ಗಿಡ ನೆಡುವ ಸಂಕಲ್ಪ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 16:37 IST
Last Updated 4 ಜೂನ್ 2021, 16:37 IST
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆವರಣದಲ್ಲಿ ಔಷಧ ಸಸ್ಯಗಳನ್ನು ಬೆಳೆಸಿರುವುದು
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆವರಣದಲ್ಲಿ ಔಷಧ ಸಸ್ಯಗಳನ್ನು ಬೆಳೆಸಿರುವುದು   

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಆಹ್ಲಾದಕರ ವಾತಾವರಣ ನಿರ್ಮಿಸುವ ಉದ್ದೇಶದಿಂದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ತನ್ನ ಆವರಣದಲ್ಲಿ ಆರೋಗ್ಯ ವನವನ್ನು ನಿರ್ಮಿಸಿದ್ದು, ಮುಂದಿನ ದಿನಗಳಲ್ಲಿ 10 ಸಾವಿರ ಗಿಡಗಳನ್ನು ನೆಡುವ ಸಂಕಲ್ಪವನ್ನು ಸಂಸ್ಥೆ ಕೈಗೊಂಡಿದೆ.

23 ಎಕರೆಯಲ್ಲಿ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಸುಮಾರು 30 ಸಾವಿರ ಗಿಡಗಳನ್ನು ಬೆಳೆಸಲಾಗಿದೆ. ಲಕ್ಷ್ಮಣಫಲ, ರಾಮಫಲ, ಸೀತಾಫಲ, ಬಕುಳ, ಪುನಗ, ರುದ್ರಾಕ್ಷಿ ಸೇರಿದಂತೆ ವಿವಿಧ ತಳಿಯ ಗಿಡಗಳು ಹಾಗೂ ಔಷಧ ಸಸ್ಯಗಳನ್ನು ನೆಡಲಾಗಿದೆ. ವಿಶ್ವ ಪರಿಸರ ದಿನದ ಪ್ರಯುಕ್ತ ಶನಿವಾರ ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡಲಾಗುತ್ತಿದೆ.

‘ಕ್ಯಾನ್ಸರ್ ರೋಗಿಗಳು ಮಾನಸಿಕವಾಗಿ ಕುಗ್ಗಿ, ಆತ್ಮಸ್ಥೈರ್ಯ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ, ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಉದ್ಯಾನ ನಿರ್ಮಿಸಲಾಗಿದೆ. ಎಲ್ಲೆಡೆ ಹೂವು ಹಾಗೂ ಹಣ್ಣಿನ ಗಿಡಗಳನ್ನು ನಡೆಲಾಗುತ್ತಿದೆ. ಇದರಿಂದ ವಾತಾವರಣದಲ್ಲಿನ ತಾಪಮಾನ ಕೂಡ ಇಳಿಕೆಯಾಗಿ, ಶುದ್ಧಗಾಳಿ ದೊರೆಯುತ್ತದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.