ADVERTISEMENT

ಡಿ.29ಕ್ಕೆ ವಿಶ್ವ ಮಾದಿಗರ 3ನೇ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 20:26 IST
Last Updated 24 ನವೆಂಬರ್ 2020, 20:26 IST
ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈ ಮಾದಿಗರ ಬೌದ್ಧಿಕ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಗೆಡ್ಡಂ ಬಾಪಿರಾಜು ಮಾತನಾಡಿದರು. ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಆರ್. ಮುನಿರಾಜು, ಗೌರವಾಧ್ಯಕ್ಷ ಜಂಬೂ ದ್ವೀಪ ಸಿದ್ದರಾಜು, ಮುಖಂಡರಾದ ಎಂ.ನಾರಾಯಣಸ್ವಾಮಿ, ರೂಪಕಲಾ ಡಿ. ಮತ್ತು ಇತರರು ಹಾಜರಿದ್ದರು.

ಯಲಹಂಕ: ‘ಜೈ ಮಾದಿಗರ ಬೌದ್ಧಿಕ ವೇದಿಕೆಯ ವತಿಯಿಂದ ಡಿಸೆಂಬರ್ 29ರಂದು ವಿಶ್ವ ಮಾದಿಗರ 3ನೇ ವಾರ್ಷಿಕೋತ್ಸವವನ್ನು ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿ ಸಲಾಗುವುದು’ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಗೆಡ್ಡಂ ಬಾಪಿರಾಜು ತಿಳಿಸಿದರು.

ಈ ಕುರಿತು ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸುಮಾರು 25 ಕೋಟಿ ಮಾದಿಗರಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮನ್ನು ಕಡೆಗಣಿಸುತ್ತಾ ಬಂದಿವೆ. ಈ ಸಮಾವೇಶದ ಮೂಲಕ ಸರ್ಕಾರಗಳಿಗೆ ಸಂದೇಶ ರವಾನಿಸಲಾಗುವುದು’ ಎಂದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಆರ್.ಮುನಿರಾಜು ಮಾತನಾಡಿ, ‘ವರ್ಷದಲ್ಲಿ ಒಂದು ದಿನವನ್ನು ಮಾದಿಗರ ದಿನವನ್ನಾಗಿ ಆಚರಿಸಬೇಕು. ಮಾದಿಗರ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಸರ್ಕಾರಗಳನ್ನು ಒತ್ತಾಯಿಸಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.