ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಸಾಹಿತಿ ಆರ್. ಲಕ್ಷ್ಮೀನಾರಾಯಣ ಆಯ್ಕೆಯಾಗಿದ್ದಾರೆ.
ಸಾಹಿತಿ ಪಿ.ವಿ. ನಾರಾಯಣ ಅವರ ನಿಧನದಿಂದ ಈ ಹುದ್ದೆ ತೆರವಾಗಿತ್ತು. ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾದ ಆರ್. ಲಕ್ಷ್ಮೀನಾರಾಯಣ ಅವರು, 30 ಕೃತಿಗಳನ್ನು ರಚಿಸಿದ್ದಾರೆ. ನಾಲ್ಕು ದಶಕಗಳು ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿರುವ ಅವರು, ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರನ್ನು ಸರ್ವಾನುಮತದಿಂದ ಗೌರವಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.