ನಟ ಯಶ್
ಬೆಂಗಳೂರು: ನಟ ಯಶ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಬ್ಯಾನರ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜಿ.ಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಸಂತನಗರ ಉಪ ವಿಭಾಗದ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಚಾಲುಕ್ಯ ವೃತ್ತದಿಂದ ವಿಂಡ್ಸರ್ ಮ್ಯಾನರ್ ವೃತ್ತದ ವರೆಗೆ ಗಾಲ್ಫ್ ಕ್ಲಬ್ ಗೋಡೆಯ ಮೇಲೆ ಜಿಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್‌ನವರು ನಟ ಯಶ್ ಅವರ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರವುಳ್ಳ ಬಂಟಿಂಗ್ಸ್/ಬ್ಯಾನರ್‌ಗಳನ್ನು ಅನಧಿಕೃತವಾಗಿ ಅಂಟಿಸಲಾಗಿತ್ತು. ಯಾವುದೇ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದುಕೊಂಡಿಲ್ಲ. ಅಲ್ಲದೇ ನಗರದ ಸೌಂದರ್ಯವನ್ನು ವಿರೂಪಗೊಳಿಸುವ ಉದ್ದೇಶದಿಂದ ಬ್ಯಾನರ್ ಅಳವಡಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂಬುದಾಗಿ ಕೋರಿ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.