
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಿತ್ರನಟ ಯಶ್ ಅವರಿಗೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್‌ಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
‘ಆದಾಯ ತೆರಿಗೆ ಕಾಯ್ದೆ-1961ರ ಕಲಂ 153 ಸಿ ಅಡಿಯಲ್ಲಿ ಆರು ವರ್ಷಗಳ ಅವಧಿಯ ಆದಾಯ ತೆರಿಗೆ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ನೋಟಿಸ್‌ಗಳನ್ನು ರದ್ದುಗೊಳಿಸಬೇಕು’ ಎಂದು ಕೋರಿ ಯಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.
‘ನೋಟಿಸ್‌ಗಳು ಸಮರ್ಥನೀಯ ಕಾರಣಗಳಿಂದ ಕೂಡಿಲ್ಲ. ನೋಟಿಸ್ ನೀಡುವಾಗ ಕಾನೂನು ಪ್ರಕ್ರಿಯೆಯ ಉಲ್ಲಂಘನೆಯಾಗಿದೆ. ಹೀಗಾಗಿ, ಇವು ಊರ್ಜಿತವಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
‘ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ್ದರೂ ಅಧಿಕಾರಿಗಳು ಅವರನ್ನು ಶೋಧಿಸದ ವ್ಯಕ್ತಿ ಎಂದು ತಪ್ಪಾಗಿ ನಡೆಸಿಕೊಂಡಿದ್ದಾರೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.