ADVERTISEMENT

ಪ್ರೀತಿಯ ನಾಟಕವಾಡಿ ಬಾಲಕಿಯರ ಅಪಹರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 5:42 IST
Last Updated 17 ನವೆಂಬರ್ 2021, 5:42 IST

ಬೆಂಗಳೂರು: ಪ್ರೀತಿಯ ನಾಟಕವಾಡಿ ಬಾಲಕಿಯರನ್ನು ಅಪಹರಿಸಿದ್ದ ಆರೋಪಿಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಆರೀಫ್‌ (19) ಹಾಗೂ ವಾಹೀದ್‌ (19) ಬಂಧಿತರು.

‘ನಗರದಲ್ಲಿ ಸೋಫಾ ರಿಪೇರಿ ಮಾಡಿ ಜೀವನ ಸಾಗಿಸುತ್ತಿದ್ದ ಆರೋಪಿಗಳು ಯಶವಂತಪುರದಲ್ಲಿ ನೆಲೆಸಿದ್ದ ಬಾಲಕಿಯರೊಂದಿಗೆ ಸ್ನೇಹ ಬೆಳೆಸಿದ್ದರು. ಬಳಿಕ ಪ್ರೀತಿಯ ನಾಟಕವಾಡಿ ಅವರನ್ನು ಅಪಹರಿಸಿದ್ದರು. ಬಾಲಕಿಯರ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.