ADVERTISEMENT

ಶಾಂತಿ ಕಾಪಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 8:00 IST
Last Updated 19 ಡಿಸೆಂಬರ್ 2019, 8:00 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕಾಪಾಡಿ.ಶಾಂತಿ ಕದಡಲು ಬಿಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಇಂದು ನಾಡಿನ ಜನತೆಯಲ್ಲಿ ಕಳಕಳಿಯ ಮನವಿ ಮಾಡಿದರು.

ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಿ.ಜನರ ಆಶಯಗಳಿಗೆ ಧಕ್ಕೆ ತರಬೇಡಿ ಎಂದು ಮುಖ್ಯಮಂತ್ರಿಗಳು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ನಾಯಕರಿಗೆ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಕಾನೂನು. ಇದರಿಂದ ಪ್ರಜೆಗಳಿಗೆ ಯಾವುದೇ ತೊಂದರೆ ಇಲ್ಲ ಮತ್ತು ಆತಂಕಕ್ಕೆ ಒಳಪಡುವ ಅವಶ್ಯಕತೆ ಇಲ್ಲ. ದೇಶದ ನಾಗಕರಿಗೆ ಇದರಿಂದ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ಪೌರತ್ವ ಕಾಯ್ದೆ ಜನರನ್ನು ಅವರ ರಾಷ್ಟ್ರೀಯತೆ ಆಧಾರದ ಮೇಲೆ ಗುರುತಿಸುತ್ತದೆ ವಿನಃ. ಅವರ ಜಾತಿ ಪಂಥ ಧರ್ಮದ ಮೇಲೆ ಅಲ್ಲ. ಇದು ರಾಷ್ಟ್ರೀಯ ಕಾಯ್ದೆ. ದೇಶದ ಎಲ್ಲಾ ರಾಜ್ಯಗಳು, ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದು ಕಾಯ್ದೆ ತಾನಾಗಿಯೇ ಅನ್ವಯವಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.