ADVERTISEMENT

ರಾಜಧಾನಿಯಲ್ಲಿ ಕೊರೊನಾ: ನಾಳೆ ಬೆಂಗಳೂರು ಶಾಸಕರ ಸಭೆ ಕರೆದ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 5:35 IST
Last Updated 25 ಜೂನ್ 2020, 5:35 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು:'ರಾಜ್ಯದಲ್ಲಿಕೊರೊನಾ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಾಳೆ ಬೆಂಗಳೂರಿನ ಶಾಸಕರು, ಸಚಿವರ ಸಭೆ ಕರೆಯಲಾಗಿದೆ. ಕೊರೊನಾ ನಿಯಂತ್ರಣ ಸಂಬಂಧ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಮಾತನಾಡಿದ ಅವರು, 'ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಿರುವ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ' ಎಂದು ತಿಳಿಸಿದರು.

'ಕೊರೊನಾ ತಡೆಗೆ ಜನತೆ ಸಹಕಾರ ನೀಡಬೇಕು. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಬೇಕು' ಎಂದು ಮನವಿ ಮಾಡಿದರು.

ADVERTISEMENT

ಹೋಂ ಕ್ವಾರಂಟೈನ್‌ಗೆ ಬಿಗಿ ನಿಯಮ

'ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ.ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

'ಹೋರಾಟದಲ್ಲಿ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು.ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಿ' ಎಂದು ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.