ADVERTISEMENT

ವಿಷ್ಣು ಸ್ಮಾರಕಕ್ಕೆ ಮೂರ್ನಾಲ್ಕು ದಿನಗಳಲ್ಲಿ ಅಡಿಗಲ್ಲು: ಯಡಿಯೂರಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 6:04 IST
Last Updated 18 ಡಿಸೆಂಬರ್ 2019, 6:04 IST
ವಿಷ್ಣುವರ್ಧನ್
ವಿಷ್ಣುವರ್ಧನ್   

ಬೆಂಗಳೂರು: ‘ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಡಿಸೆಂಬರ್‌ 30ರಂದು ನಟ ವಿಷ್ಣುವರ್ಧನ್‌ ಅವರ ಪುಣ್ಯಸ್ಮರಣೆ ಅಂಗವಾಗಿಮುಖ್ಯಮಂತ್ರಿ ಅವರನ್ನು ಭೇಟಿಯಾದನಟಿ ಭಾರತಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣದ ಕುರಿತು ಚರ್ಚಿಸಿದರು.

ಹಿನ್ನಲೆ

ADVERTISEMENT

ಸ್ಮಾರಕ ನಿರ್ಮಾಣ ಎಲ್ಲಿ ಮಾಡಬೇಕು ಎಂದೇ ಅನೇಕ ವರ್ಷಗಳ ವರೆಗೆ ವಿವಾದ ಉಂಟಾಗಿತ್ತು. ವಿಷ್ಣುವರ್ಧನ್‌ ಅವರ ಸಮಾಧಿ ಇರುವ ಅಭಿಮಾನ್‌ ಸ್ಟುಡಿಯೋದ ಜಾಗದಲ್ಲಿಯೇ ವಿಷ್ಣುವರ್ಧನ್‌ ಸಮಾಧಿ ನಿರ್ಮಿಸಬೇಕು ಎಂಬ ಎಲ್ಲರ ಅಭಿಲಾಷೆಗೆಬಾಲಕೃಷ್ಣ ಅವರ ಕುಟುಂಬ ಸದಸ್ಯರು ತಕರಾರು ಎತ್ತಿದ್ದರು. ಆಗ ವಿಷ್ಣು ಸೇನಾ ಸಮಿತಿ ಪ್ರತಿಭಟನೆ ನಡೆಸಿತ್ತು.

ಅದಾದ ನಂತರ ಸ್ಮಾರಕ ನಿರ್ಮಾಣಕ್ಕೆಬಾಲಕೃಷ್ಣ ಅವರ ಮಕ್ಕಳು ಒಪ್ಪಿಕೊಂಡಿದ್ದರು. ಆದರೆ, ಭಾರತಿ ವಿಷ್ಣು ವರ್ಧನ್‌ ಅವರು ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪಟ್ಟಿ ಹಿಡಿದರು. ಅದಕ್ಕಾಗಿ ಸರ್ಕಾರ ಮೈಸೂರಿನ ಕಸಬಾ ಹೋಬಳಿಯ ಹಾಲಾಳು ಗ್ರಾಮದಲ್ಲಿಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿತ್ತು. ಮಂಜೂರಾತಿ ಕುರಿತು ಜಯಪುರ ಹೋಬಳಿಯ ಉದ್ಬೂರು ಗ್ರಾಮದ ಮಹದೇವಪ್ಪ ಸೇರಿದಂತೆ ಐವರು ತಕರಾರು ತೆಗೆದಿದ್ದರು.

ಈ ವ್ಯಾಜ್ಯ ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಾಮಗಾರಿ ಮುಂದುವರಿಕೆಗೆ ತಡೆ ನೀಡಿತ್ತು.

ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಮೈಸೂರು ಜಿಲ್ಲಾಡಳಿತ ಹೈಕೋರ್ಟ್‌ ಮೆಟ್ಟಿಲೇರಿತ್ತು. ಏಪ್ರಿಲ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಅದರಿಂದ ಸ್ಮಾರಕ ನಿರ್ಮಾಣಕ್ಕಿದ್ದಕಾನೂನು ತೊಡಕು ಬಗೆಹರಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.