ADVERTISEMENT

ಯಲಹಂಕ: ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 20:28 IST
Last Updated 5 ಫೆಬ್ರುವರಿ 2026, 20:28 IST
   

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎ.ಪಿ.ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್.ಜಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರ ಆಯ್ಕೆಗಾಗಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಹತ್ತು ಮಂದಿ ಆಯ್ಕೆಯಾಗಿದ್ದರು.  ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎ.ಪಿ.ವಿಜಯಕುಮಾರ್ ಅಧ್ಯಕ್ಷರಾಗಿ ಹಾಗೂ ಶ್ರೀಧರ್.ಜಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. 

ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅದ್ದೆ , ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಎಸ್‌.ಸಿ ಘಟಕದ ಅಧ್ಯಕ್ಷ ಕೋಗಿಲು ವೆಂಕಟೇಶ್, ಸಂಘದ ನಿರ್ದೇಶಕರಾದ ಎಚ್.ಆನಂದ್, ಮುನಿಯಪ್ಪರೆಡ್ಡಿ, ಗಂಗರಾಜು, ಕೇಶವ, ಶಿವಕುಮಾರ್, ಲಕ್ಷ್ಮಿ, ಜಯಲಕ್ಷ್ಮಮ್ಮ, ಮುನೀರಮ್ಮ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.