
ಪ್ರಜಾವಾಣಿ ವಾರ್ತೆ
ಯಲಹಂಕ: ಅರಕೆರೆ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ರಾಮೆಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚನ್ನಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಒಟ್ಟು 22 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕಾಗಿ ರಾಮೆಲ್ಲಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಬಮೂಲ್ ನಿರ್ದೇಶಕ ಕಡತನಮಲೆ ಸತೀಶ್, ಬಿಜೆಪಿ ಮುಖಂಡ ಎಸ್.ಎನ್.ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿದಾಸಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.