ADVERTISEMENT

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು

ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 21:02 IST
Last Updated 30 ಜೂನ್ 2020, 21:02 IST
ವೀರ ಸಾವರ್ಕರ್
ವೀರ ಸಾವರ್ಕರ್   

ಬೆಂಗಳೂರು: ಯಲಹಂಕದ ಡೇರಿ ವೃತ್ತದಲ್ಲಿನ ನೂತನ ಮೇಲ್ಸೇತುವೆಗೆ ‘ವೀರ ಸಾವರ್ಕರ್‌’ ಹೆಸರು ಇಡುವ ಪ್ರಸ್ತಾವವನ್ನು ಬಿಬಿಎಂಪಿಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು. ನಗರಾಭಿವೃದ್ಧಿ ಇಲಾಖೆಯು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಬೇಕಿದೆ.

ಬಿಬಿಎಂಪಿಯಲ್ಲಿ ಫೆಬ್ರುವರಿಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಯಲಹಂಕದ ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೇರಿವೃತ್ತದ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಪ್ರಸ್ತಾವ ಮಂಡಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಿ, 30 ದಿನ ಕಾಲಾವಕಾಶ ನೀಡಲಾಗಿತ್ತು. ಈ ವೇಳೆ, ಎರಡೇ ಆಕ್ಷೇಪಣೆಗಳು ಬಂದಿದ್ದವು. ಒಬ್ಬರು ಸಾವರ್ಕರ್‌ ಹೆಸರು ಇಡಬೇಕು ಎಂದು ಹೇಳಿದ್ದರೆ, ಮತ್ತೊಬ್ಬರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಆಕ್ಷೇಪಣೆಗೆ ಸರಿಯಾದ ಆಧಾರ ಇಲ್ಲದ ಹಿನ್ನೆಲೆಯಲ್ಲಿ, ವೀರ ಸಾವರ್ಕರ್‌ ಹೆಸರಿಡಲು ಆಯುಕ್ತರು ಶಿಫಾರಸು ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT