ADVERTISEMENT

ಯಲಹಂಕ | ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 15:56 IST
Last Updated 18 ಡಿಸೆಂಬರ್ 2025, 15:56 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಯಲಹಂಕ: ರಾಜಾನುಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊನ್ನೇನಹಳ್ಳಿ ಗೇಟ್‌ ಬಳಿ ಬುಧವಾರ, ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ.

ADVERTISEMENT

ದಿಬ್ಬೂರು ಸಮೀಪದ ಪ್ರೆಸಿಡೆನ್ಸಿ ಕಾಲೇಜಿನ ಬಿಬಿಎ ಮೊದಲನೇ ವರ್ಷದ ವಿದ್ಯಾರ್ಥಿ ತಿರುಪತಿಯ ಆನಂದ ಸೂರ್ಯ(19) ಮೃತಪಟ್ಟವರು. ಬಿ.ಟೆಕ್‌ ವಿದ್ಯಾರ್ಥಿ ಪುನೀತ್‌(19) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇವರಿಬ್ಬರೂ ಕಾಲೇಜಿನ ಹಾಸ್ಟೆಲ್‌ನಲ್ಲಿ ನೆಲಸಿದ್ದರು. ರಾತ್ರಿ 12.30ರ ಹೊತ್ತಿನಲ್ಲಿ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಹೊನ್ನೇನಹಳ್ಳಿ ಗೇಟ್‌ ಸಮೀಪದಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.