ADVERTISEMENT

‘ಯೆಲ್ಲೊ ಅಲರ್ಟ್’ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 21:31 IST
Last Updated 24 ಅಕ್ಟೋಬರ್ 2020, 21:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಅ.25ರಂದು ಧಾರಾಕಾರ ಮಳೆಯಾ
ಗುವ ಮುನ್ಸೂಚನೆ ಇರುವುದರಿಂದ ಘೋಷಿತ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಅನ್ನು ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ADVERTISEMENT

ಮಳೆ-ಎಲ್ಲಿ, ಎಷ್ಟು?: ಬೆಂಗಳೂರು ನಗರ ಜಿಲ್ಲೆಯ ಗೋಪಾಲನಗರ ಹಾಗೂ ಮಂಡ್ಯ ಜಿಲ್ಲೆಯ ಬೆಳ್ಳೂರು ಭಾಗದಲ್ಲಿ ಗರಿಷ್ಠ 10 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.