ADVERTISEMENT

ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಿ: ಶಾಸಕ ಸೋಮಶೇಖರ್ ಸೂಚನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಸೋಮಶೇಖರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 23:35 IST
Last Updated 23 ಸೆಪ್ಟೆಂಬರ್ 2025, 23:35 IST
<div class="paragraphs"><p>ಎ.ಐ ಚಿತ್ರ</p></div>

ಎ.ಐ ಚಿತ್ರ

   

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಆಯುಕ್ತ ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.  

ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಯಶವಂತಪುರ ವ್ಯಾಪ್ತಿಯಲ್ಲಿ ಒಣಗಿದ ಮರ ಹಾಗೂ ಅಪಾಯದ ಹಂತದಲ್ಲಿರುವ ಮರಗಳಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.   

ADVERTISEMENT

‘ಯಶವಂತಪುರ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ವ್ಯವಸ್ಥಿತವಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡಬೇಕು. ಕಸ ಹಾಕುವ ಬ್ಲಾಕ್‌‌ಸ್ಪಾಟ್‌ಗಳ ನಿರ್ಮೂಲನೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ ಪಕ್ಕದಲ್ಲಿ ಕಸ ಎಸೆಯುವವರನ್ನು ಗುರುತಿಸಿ, ದಂಡ ವಿಧಿಸಬೇಕು’ ಎಂದು ಸೂಚಿಸಿದರು. 

‘ಈ ಭಾಗದ ರಾಜಕಾಲುವೆಗಳಲ್ಲಿ ಹೂಳು ತೆರವುಗೊಳಿಸಬೇಕು. ಕೆರೆಗಳ ಸುಧಾರಣೆ ಮಾಡಿ ಅಭಿವೃದ್ಧಿಗೊಳಿಸಬೇಕು. ಉದ್ಯಾನಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದು, ಸಮುದಾಯ ಭವನಗಳು ಪೂರ್ಣಗೊಂಡಿದ್ದರೂ ಅವುಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ, ಅವುಗಳು ಸರಿಯಾಗಿ ಬಳಕೆ ಆಗುವಂತೆ ಕ್ರಮ ಕೈಗೊಳ್ಳಬೇಕು. ನಿಗದಿತ ಆಸ್ತಿ ತೆರಿಗೆ ಸಂಗ್ರಹಿಸಬೇಕು. ಇ-ಖಾತಾಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.