
ಯಶವಂತಪುರ ರೈಲು ನಿಲ್ದಾಣ
(ಸಂಗ್ರಹ ಚಿತ್ರ)
ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಪುನರಾಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೊ ಬದಿಯ ಪ್ರವೇಶದ್ವಾರ ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದೆ.
ಯಶವಂತಪುರ ರೈಲು ನಿಲ್ದಾಣದ ಮೆಟ್ರೊ ಬದಿಯ ಪ್ರವೇಶದ್ವಾರವನ್ನು ತಾತ್ಕಾಲಿಕವಾಗಿ ಪ್ಲಾಟ್‌ಫಾರ್ಮ್ 6ರ ಬಳಿ ಸುಮಾರು 150 ಮೀ. ಮುಖ್ಯ ರಸ್ತೆಯ ಕಡೆಗೆ ಸ್ಥಳಾಂತರಿಸಲಾಗಿದೆ. ಜನರಲ್ ಟಿಕೆಟ್ ಕೌಂಟರ್‌ಗಳನ್ನು ಸಹ ಈ ತಾತ್ಕಾಲಿಕ ಪ್ರವೇಶದ್ವಾರಕ್ಕೆ ಸ್ಥಳಾಂತರಿಸಲಾಗಿದ್ದು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳಿಗೆ ತೆರಳಲು ಇಲ್ಲಿರುವ 30 ಮೀ. ಅಗಲದ ಪಾದಚಾರಿ ಮೇಲ್ಸೇತುವೆಯನ್ನು ಬಳಸಿಕೊಳ್ಳುವಂತೆ ನೈಋತ್ಯ ರೈಲ್ವೆ ಕೋರಿದೆ.
ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ಮತ್ತು ನೆರವನ್ನು ನೀಡಲು ಆರ್.ಪಿ.ಎಫ್. ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಸಹಾಯ ಕೇಂದ್ರವನ್ನು ತೆರೆಯಲಾಗಿದೆ.
ಸಾರ್ವಜನಿಕರಿಗೆ ಮಾಹಿತಿ ಫಲಕಗಳ ಅಳವಡಿಕೆಯ ಮೂಲಕ ಪ್ರಯಾಣಿಕರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಯಶವಂತಪುರ ರೈಲು ನಿಲ್ದಾಣದಲ್ಲಿ ಸುಧಾರಿತ ಪ್ರಯಾಣಿಕ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಪ್ರಯಾಣಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.