ADVERTISEMENT

ಗೋಪಾಲಯ್ಯ ಸೇರ್ಪಡೆಗೆ ಜವರಾಯಿಗೌಡ ನೇತೃತ್ವ: ಶಾಸಕ ಎಸ್.ಟಿ.ಸೋಮಶೇಖರ್ ಆರೋಪ

ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆರೋಪ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 15:31 IST
Last Updated 17 ಡಿಸೆಂಬರ್ 2019, 15:31 IST
ಎಸ್.ಟಿ.ಸೋಮಶೇಖರ್ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ಗದೆ ನೀಡಿ ಸನ್ಮಾನಿಸಲಾಯಿತು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇದ್ದಾರೆ.
ಎಸ್.ಟಿ.ಸೋಮಶೇಖರ್ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ಗದೆ ನೀಡಿ ಸನ್ಮಾನಿಸಲಾಯಿತು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇದ್ದಾರೆ.   

ರಾಜರಾಜೇಶ್ವರಿನಗರ: ‘ಮಹಾಲಕ್ಷ್ಮಿ ಬಡಾವಣೆಯ ಶಾಸಕ ಕೆ.ಗೋಪಾಲಯ್ಯ ಅವರನ್ನು ಬಿಜೆಪಿ ಸೇರಿಸಲು ನೇತೃತ್ವ ವಹಿಸಿದವರೇ ಜೆಡಿಎಸ್‌ ಮುಖಂಡ ಜವರಾಯಿ ಗೌಡ. 2023ರ ವಿಧಾನ
ಸಭಾ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂಬ ಷರತ್ತನ್ನು ಈ ವೇಳೆ ವಿಧಿಸಿದ್ದರು’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಆರೋಪಿಸಿದರು.

ಕೊಮ್ಮಘಟ್ಟ ರಸ್ತೆಯ ಬಂಡೇಶ್ವರಸ್ವಾಮಿ ಸಮುದಾಯಭವನದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿ, ‘ನಾನು ಬಿಜೆಪಿಗೆ ಸೇರುತ್ತೇನೆ ಎಂದು ಜವರಾಯಿಗೌಡಗೆ ಗೊತ್ತಿದ್ದರೆ ಪಕ್ಷದ ನಾಯಕರ ಜೊತೆ ಚರ್ಚಿಸುತ್ತಿರಲಿಲ್ಲ. ನಾನು ಬಿಜೆಪಿ ಸೇರಿದ ವಿಷಯ ತಿಳಿದು ಆತಂಕಕ್ಕೆ ಒಳಗಾದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT