ADVERTISEMENT

ಯಶವಂತಪುರ- ವಿಜಯಪುರ ರೈಲು ಸಂಚಾರ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:37 IST
Last Updated 6 ಮಾರ್ಚ್ 2024, 15:37 IST
<div class="paragraphs"><p>ಯಶವಂತಪುರ ರೈಲು ನಿಲ್ದಾಣ</p></div>

ಯಶವಂತಪುರ ರೈಲು ನಿಲ್ದಾಣ

   

ಬೆಂಗಳೂರು: ಯಶವಂತಪುರ ಮತ್ತು ವಿಜಯಪುರ ನಡುವಿನ ವಿಶೇಷ ರೈಲುಗಳ ಸಂಚಾರದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಯಶವಂತಪುರ– ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಮಾರ್ಚ್‌ 30 ರವರೆಗೆ ಓಡಿಸಲು ಈ ಹಿಂದೆ ಸೂಚನೆ ನೀಡಲಾಗಿತ್ತು. ಇದೀಗ ಜೂನ್ 30ರವರೆಗೆ ವಿಸ್ತರಿಸಲಾಗಿದೆ. ವಿಜಯಪುರ– ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರದ ಅವಧಿ ಏಪ್ರಿಲ್‌ 1ರ ವರೆಗೆ ಇತ್ತು. ಅದನ್ನು ಜುಲೈ 1ರ ವರೆಗೆ ವಿಸ್ತರಿಸಲಾಗಿದೆ. ವೇಳಾಪಟ್ಟಿ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.