ಯಲಹಂಕ: ‘ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಸಂಬಂಧ ಸಂಸದರ ನಿಯೋಗ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿಯಾಗಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.
ಲೋಕೋಪಯೋಗಿ ಇಲಾಖೆಯ ಅನುದಾನದಡಿಯಲ್ಲಿ ₹4.40 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 6 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಡತನಮಲೆ ಗ್ರಾಮದಲ್ಲಿ ಚಾಲನೆ ನೀಡಿ ಮಾತನಾಡಿದರು.
‘ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರಾವರಿ ಮತ್ತು ಕುಡಿಯುವ ನೀರು ಒದಗಿಸಲು ಆದ್ಯತೆ ನೀಡಲಾಗುತ್ತದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಿ, ಅಗತ್ಯ ಅನುದಾನ ಮತ್ತು ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.