ADVERTISEMENT

ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ‘ಯೋಗ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 20:45 IST
Last Updated 16 ಆಗಸ್ಟ್ 2019, 20:45 IST
ಪ್ರೊ.ಕೆ.ಆರ್.ವೇಣುಗೋಪಾಲ್
ಪ್ರೊ.ಕೆ.ಆರ್.ವೇಣುಗೋಪಾಲ್   

ಕೆಂಗೇರಿ: ಬೆಂಗಳೂರು ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆಕೆಲವೇ ದಿನಗಳಲ್ಲಿ ಯೋಗ ಶಿಕ್ಷಣ ನೀಡಲು ಕ್ರಮ ವಹಿಸಲಾಗುವುದು ಎಂದು ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಕಾಲೇಜುಗಳಿಗೆ ಅಧಿಕೃತ ಸುತ್ತೋಲೆ ರವಾನಿಸಲಾಗುವುದು. ಸಂಯೋಜಿತ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಬೋಧಕರನ್ನು ಗುರುತಿಸಿ ಬೆಂಗಳೂರು ವಿಶ್ವ ವಿದ್ಯಾಲಯದ ಯೋಗ ಕೇಂದ್ರದಲ್ಲಿ ಸೂಕ್ತ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಶಿಕ್ಷಕರು ಆಯಾ ಕಾಲೇಜು ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಲಿದ್ದಾರೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 270 ಕಾಲೇಜುಗಳು ಇದ್ದು, ಪ್ರತಿ ಕಾಲೇಜಿನಿಂದ ಒಬ್ಬೊಬ್ಬರು ಶಿಕ್ಷಕರನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಶೈಕ್ಷಣಿಕ ಹಂತದಿಂದಲೇ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗಿದೆ. ಇದರಿಂದ ಸವಾಲುಗಳನ್ನು ಸಮಚಿತ್ತದಿಂದ ಎದುರಿಸುವ ಶಕ್ತಿ ವಿದ್ಯಾರ್ಥಿಗಳಿಗೆ ಒದಗಿ ಬರಲಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.