ADVERTISEMENT

ಯೋಗ ಗುರು ವಿರುದ್ಧ ಅತ್ಯಾಚಾರ ಆರೋಪ: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 19:13 IST
Last Updated 9 ನವೆಂಬರ್ 2025, 19:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಯೋಗ ಕಲಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧಿತರಾಗಿರುವ ಯೋಗ ಗುರು ಡಾ.ನಿರಂಜನಮೂರ್ತಿ ವಿರುದ್ಧ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

19 ವರ್ಷದ ಸಂತ್ರಸ್ತೆ ನೀಡಿದ್ದ ದೂರು ಆಧರಿಸಿ ಪೊಲೀಸರು ಸೆಪ್ಟೆಂಬರ್ 18ರಂದು ನಿರಂಜನಮೂರ್ತಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿದ್ದಾರೆ.

ADVERTISEMENT

ಸಂತ್ರಸ್ತೆಯು 2021ರಿಂದ ನಿರಂಜನಮೂರ್ತಿ ನಡೆಸುತ್ತಿದ್ದ ಯೋಗ ತರಬೇತಿ ಸಂಸ್ಥೆಯಲ್ಲಿ ಯೋಗ ಕಲಿಕೆಗೆ ಹೋಗುತ್ತಿದ್ದರು. 2023ರಲ್ಲಿ ಯೋಗ ಸ್ಫರ್ಧೆಯಲ್ಲಿ ಪಾಲ್ಗೊಳ್ಳಲು ಥಾಯ್ಲೆಂಡ್‍ಗೆ ಹೋಗಿದ್ದಾಗ ನಿರಂಜನಮೂರ್ತಿ, ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡಿದ್ದರು. ‘ಯೋಗದಲ್ಲಿ ಅಂತರರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ಸರ್ಕಾರಿ ಕೆಲಸವೂ ಸಿಗಬಹುದೆಂದು ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

‘ಆಗಸ್ಟ್‌ನಲ್ಲಿ ನಡೆದಿದ್ದ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪದಕ ಕೊಡಿಸುವುದಾಗಿ ಸಂತ್ರಸ್ತೆಗೆ ಆಮಿಷವೊಡ್ಡಿ ತಮ್ಮ ಸಂಸ್ಥೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ರಾಜ್ಯ ಮಟ್ಟದ ಯೋಗ ಸ್ಫರ್ಧೆಯಲ್ಲಿ ಪದಕ ಕೊಡಿಸುವುದಾಗಿ ಆಕೆಗೆ ನಂಬಿಸಿ ಮತ್ತೆ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದರು. ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವುದಕ್ಕೆ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಕೆಲ ವಿಡಿಯೊ ಮತ್ತು ಪೊಟೋಗಳು ಸಿಕ್ಕಿವೆ’ ಎಂದು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.