ವಿಧಾನ ಸೌಧ
(ಸಾಂಕೇತಿಕ ಚಿತ್ರ)
ಬೆಂಗಳೂರು: ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ ಹತ್ತು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿಪ್ಪಾಣಿ, ಬೈಲಹೊಂಗಲ, ಬಾದಾಮಿ, ಮುಧೋಳ, ಗಜೇಂದ್ರಗಢ, ಕೊಪ್ಪಳ ಜಿಲ್ಲೆಯ ಕುಕನೂರು, ರಾಣೆಬೆನ್ನೂರು, ಬಸವನಬಾಗೇವಾಡಿ, ದೇವನಹಳ್ಳಿ ಹಾಗೂ ಎಚ್.ಡಿ. ಕೋಟೆಯಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.