ಬೆಂಗಳೂರು: ರೀಲ್ಸ್‌ಗಾಗಿ ನಡುರಸ್ತೆಯಲ್ಲಿ ವಿಡಿಯೊ ಮಾಡಿದ್ದ ಪ್ರಶಾಂತ್ ಎಂಬ ಯುವಕನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
‘ಚಾಲಕನಾಗಿದ್ದ ಪ್ರಶಾಂತ್, ರೀಲ್ಸ್ ವ್ಯಾಮೋಹ ಬೆಳೆಸಿಕೊಂಡಿದ್ದ. ಎಸ್.ಜೆ.ಪಾರ್ಕ್ನ ಮುಖ್ಯ ರಸ್ತೆಯಲ್ಲಿ ಕುರ್ಚಿ ಹಾಕಿಕೊಂಡು ಕುಳಿತು ಟೀ ಕುಡಿಯುತ್ತಾ ರೀಲ್ಸ್ ಮಾಡಿದ್ದ. ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದ. ಇದನ್ನು ಗಮನಿಸಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಆರೋಪಿಯ ವಿರುದ್ಧ ಎನ್ಸಿಆರ್ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.
‘ಏಪ್ರಿಲ್ 12ರಂದು ಆರೋಪಿ ರೀಲ್ಸ್ ಮಾಡಿದ್ದ. ರೀಲ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.