ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುಟ್ಯೂಬ್ ವಿರುದ್ಧ ಎಫ್ಐಆರ್

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 16:19 IST
Last Updated 4 ನವೆಂಬರ್ 2025, 16:19 IST
   

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ‘ನ್ಯೂಸ್ ಫ್ಯಾಕ್ಟರಿ–09’ ಹೆಸರಿನ ಯು–ಟ್ಯೂಬ್ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಎಸ್‌ಐ ಅಸ್ಮಾಬೇಗಂ ಅವರು ನೀಡಿದ ದೂರಿನ ಮೇರೆಗೆ ನಗರ ಸೈಬರ್‌ ಕ್ರೈಂ ಠಾಣೆ ಪೊಲೀಸರು ನ್ಯೂಸ್‌ ಫ್ಯಾಕ್ಟರಿ 09 ಎಂಬ ಯುಟ್ಯೂಬ್‌ ಚಾನಲ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಭಾವಚಿತ್ರ ಅವಹೇಳನಕಾರಿಯಾಗಿ ರೀಲ್ಸ್ ಮಾಡಿದ್ದ ಆರೋಪದ ಅಡಿ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.