ADVERTISEMENT

ಬೆಂಗಳೂರು: ಡ್ರಗ್ಸ್ ಮಾರುತ್ತಿದ್ದ ಯೂಟ್ಯೂಬರ್ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 16:18 IST
Last Updated 9 ಜುಲೈ 2022, 16:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಯೂಟ್ಯೂಬರ್ ಸೇರಿ ಇಬ್ಬರು ಆರೋಪಿಗಳನ್ನು ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಯೂಟ್ಯೂಬರ್ ಎಂಎಂಡಿ ಮೋಲಾ ಅಲಿಯಾಸ್ ಓಬೆಜಿ ಹಾಗೂ ಸ್ಯಾಮ್ಯುಯೆಲ್ ಬಂಧಿತರು. ಇವರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಹಾಗೂ ₹ 1,220 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನೈಜೀರಿಯಾದ ಓಬೆಜಿ, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ. ಯೂಟ್ಯೂಬ್‌ನಲ್ಲಿ ‘ಎಂಎಂಡಿ ಮೋಲಾ’ ಹೆಸರಿನಲ್ಲಿ ಚಾನೆಲ್ ತೆರೆದು, ವಿಡಿಯೊ ಅಪ್‌ಲೋಡ್ ಮಾಡುತ್ತಿದ್ದ. ಇದರ ಜೊತೆಯಲ್ಲೇ ಈತ, ಸ್ನೇಹಿತನ ಜೊತೆ ಸೇರಿ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದ’ ಎಂದೂ ತಿಳಿಸಿದರು.

ADVERTISEMENT

‘ಎಚ್‌ಬಿಆರ್‌ ಲೇಔಟ್‌ನ 1ನೇ ಹಂತದ ಟೀಚರ್ಸ್ ಕಾಲೊನಿಗೆ ಜುಲೈ 7ರಂದು ಬಂದಿದ್ದ ಆರೋಪಿಗಳು, ಗ್ರಾಹಕರಿಗೆ ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬ್ಬಂದಿ, ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವ್ಯಕ್ತಿಗಳು ತಲೆಮರೆಸಿಕೊಂಡಿದ್ದಾರೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.