
ಜೊಮ್ಯಾಟೊ ( ಸಾಂದರ್ಭಿಕ ಚಿತ್ರ )
ಬೆಂಗಳೂರು: ಜೊಮ್ಯಾಟೊ ಡೆಲಿವರಿ ಯುವಕನ ಮೇಲೆ ಹಲ್ಲೆ ಮಾಡಿದ್ದ ಇಬ್ಬರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುಬಾರಕ್ ಹಾಗೂ ಶಾರೂಕ್ ಬಂಧಿತರು.
ಹಲ್ಲೆಗೆ ಒಳಗಾದ ಚಾಂದ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಸೆ.12ರಂದು ರಾತ್ರಿ ಬಾಪೂಜಿ ನಗರದ ಬಳಿ ಆರೋಪಿಗಳು, ಜೊಮ್ಯಾಟೊ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆಯಿಂದಾಗಿ ಡೆಲಿವರಿ ಹುಡುಗ ಚಾಂದ್ ಅವರು ತಡವಾಗಿ ಸ್ಥಳಕ್ಕೆ ಹೋಗಿದ್ದರು. ಇದರಿಂದ ಕೆರಳಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನೀರಿನ ಕ್ಯಾನ್ನಿಂದ ಹೊಡೆದಿದ್ದರು. ಘಟನೆಯ ವಿಡಿಯೊವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಆ ವಿಡಿಯೊ ವೀಕ್ಷಿಸಿದ್ದ ಬ್ಯಾಟರಾಯನಪುರ ಠಾಣೆ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.