ADVERTISEMENT

‘ರೆಮಿಡಿಸಿವಿರ್’ ಔಷಧ ಒದಗಿಸಲು ಸೂಚನೆ

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಔಷಧ ವೆಚ್ಚ ಮರುಪಾವತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 23:23 IST
Last Updated 14 ಆಗಸ್ಟ್ 2020, 23:23 IST

ಬೆಂಗಳೂರು: ಸರ್ಕಾರ ಶಿಫಾರಸು ಮಾಡುವ ಕೋವಿಡ್ ಪೀಡಿತರಿಗೆ ಖಾಸಗಿ ಆಸ್ಪತ್ರೆಗಳು ‘ರೆಮಿಡಿಸಿವಿರ್’ ಔಷಧವನ್ನು ಒದಗಿಸಬೇಕು. ಈ ಔಷಧ ಖರೀದಿಯ ವೆಚ್ಚವನ್ನು ಆಸ್ಪತ್ರೆಗಳಿಗೆ ಮರುಪಾವತಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದ್ದಾರೆ.

‘ರೆಮಿಡಿಸಿವಿರ್’ಔಷಧವನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಈ ಔಷಧವನ್ನು ಬಳಸಲಾಗುತ್ತಿದೆ. ಶಿಫಾರಸು ಅನುಸಾರ ದಾಖಲಿಸಿಕೊಂಡ ಸೋಂಕಿತರ ಚಿಕಿತ್ಸೆಗೆ ಎಷ್ಟು ಪ್ರಮಾಣದಲ್ಲಿ ಔಷಧದ ಅಗತ್ಯವಿದೆ ಎನ್ನುವುದರ ಬಗ್ಗೆ ಜಿಲ್ಲಾ ಸಂಯೋಜಕರು, ಪ್ರಾದೇಶಿಕ ಸಲಹೆ ಗಾರರ ಮೂಲಕ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆಬೇಡಿಕೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಬೇಡಿಕೆ ಯನ್ನು ಪರಿಶೀಲಿಸಿದ ಬಳಿಕ ಟ್ರಸ್ಟ್, ಅಗತ್ಯ ಪ್ರಮಾಣದಲ್ಲಿ ಔಷಧ ಒದಗಿಸಲು ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಮತ್ತು ವೇರ್ ಹೌಸಿಂಗ್ ಸೊಸೈಟಿಗೆ ಸೂಚಿ ಸಲಿದೆ.

ಖಾಸಗಿ ಆಸ್ಪತ್ರೆಗಳು ಸಂಬಂಧಿಸಿದ ರೋಗಿಗಳ ಹೆಸರಲ್ಲಿ ಈ ಇಂಜೆಕ್ಷನ್ ಪಡೆಯಬೇಕು. ರೋಗಿಯ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆಯ ಮಾಹಿತಿಯನ್ನು ಟ್ರಸ್ಟ್‌ಗೆ ಸಲ್ಲಿಸಿ, ಚಿಕಿತ್ಸೆ ನೀಡಬಹುದಾಗಿದೆ ಎಂದುತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.