ADVERTISEMENT

ಅವಿಭಕ್ತ ಕುಟುಂಬಗಳಲ್ಲಿ ಉತ್ತಮ ಸಂಸ್ಕಾರ

ಕಾಶಿಯ ಗಂಗಾಧರ ಭಗವತ್ಪಾದ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 9:16 IST
Last Updated 23 ಮಾರ್ಚ್ 2018, 9:16 IST

ಬೀದರ್: ‘ಅವಿಭಕ್ತ ಕುಟುಂಬಗಳಲ್ಲಿ ಮಾತ್ರ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಕಾಣಸಿಗುತ್ತದೆ. ಆದ್ದರಿಂದ ಕುಟುಂಬಗಳು
ವಿಘಟನೆಯಾದಂತೆ ಎಚ್ಚರ ವಹಿಸಬೇಕು’ ಎಂದು ಕಾಶಿಯ ಗಂಗಾಧರ ಭಗವತ್ಪಾದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜೈ ಮಾತಾ ಭವಾನಿ ಮಂದಿರ ಟ್ರಸ್ಟ್‌, ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಆಶ್ರಯದಲ್ಲಿ ನಗರದ ನ್ಯೂ ಆದರ್ಶ ಬಡಾವಣೆಯ ಭವಾನಿ ಮಂದಿರದಲ್ಲಿ ಈಚೆಗೆ ಆಯೋಜಿಸಿದ್ದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಅವಿಭಕ್ತ ಕುಟುಂಬದಲ್ಲಿ ಬೆಳೆದವರಲ್ಲಿ ಉತ್ತಮ ಸಂಸ್ಕಾರ ಇರುತ್ತಿತ್ತು. ಜಪ, ತಪ, ಪೂಜೆ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿದ್ದವು. ಆದರೆ, ಇಂದು ಅವಿಭಕ್ತ ಕುಟುಂಬಗಳೇ ಮಾಯವಾಗುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

‘ದೇವರ ನಾಮಸ್ಮರಣೆ ಮಾಡಿದರೆ ಶಾಂತಿ, ನೆಮ್ಮದಿ ದೊರೆಯುತ್ತದೆ’ ಎಂದು ತಿಳಿಸಿದರು.

ವಿಶ್ವನಾಥ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಬ್ರಿಮ್ಸ್‌ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಉಮಾ ದೇಶಮುಖ, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ ಶಿವಯ್ಯ ಸ್ವಾಮಿ, ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಸದಸ್ಯ ಶಿವಕುಮಾರ ಸ್ವಾಮಿ, ಕರ್ನಾಟಕ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿ ಪ್ರಕಾಶ ಕನ್ನಾಳೆ, ಪ್ರಮುಖರಾದ ಫಾಲಕ್ಷಯ್ಯ ಸ್ವಾಮಿ, ಆನಂದ ಹಿರೇಮಠ, ಶಾಂತಲಿಂಗಯ್ಯ ಸ್ವಾಮಿ, ಗದಗೆಪ್ಪ ಹಿರೇಮಠ, ಅರವಿಂದ ಪೋಲಾ ಇದ್ದರು.

ನ್ಯೂ ಮದರ್‌ ತೆರೆಸಾ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಂಜೀವಕುಮಾರ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಸ್ವಾಮಿ ನಿರೂಪಿಸಿದರು. ವೀರೇಶ ಹಿರೇಮಠ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.